ದಾವಣಗೆರೆ: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಆಕ್ಟೋಬರ್ 3 ರಿಂದ 11 ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೇ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಪುಸ್ತಕ ಮಾರಾಟ ಮೇಳ ಏರ್ಪಡಿಸಲಾಗಿದೆ.
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ https://kpp.karnataka.gov.in ನಲ್ಲಿ ಪಡೆದು ಸಾವಿರ ರೂಗಳ ಭದ್ರತಾ ಠೇವಣಿಯ ಡಿ.ಡಿ.ಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆ.ಸಿ.ರಸ್ತೆ, ಬೆಂಗಳೂರು ಇವರ ಹೆಸರಿಗೆ ಪಡೆದು ಸೆಪ್ಟಂಬರ್ 30 ರೊಳಗೆ ಅಂಚೆ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-22484516, 22107704 ಸಂಪರ್ಕಿಸಲು ತಿಳಿಸಲಾಗಿದೆ.



