Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಡಳಿತದಿಂದ ಶ್ರೀ ನಾರಾಯಣ ಗುರು ಜಯಂತಿ

ದಾವಣಗೆರೆ

ದಾವಣಗೆರೆ: ಜಿಲ್ಲಾಡಳಿತದಿಂದ ಶ್ರೀ ನಾರಾಯಣ ಗುರು ಜಯಂತಿ

ದಾವಣಗೆರೆ: ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕುಂಬಳೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಸುಮತಿ ಜಯಪ್ಪ, ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಮನುಕುಲ ಕುಟುಂಬಕ್ಕೆ ಸಾರಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದ ಮಹಾನ್ ಸಂತ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದರು.

ಹದಿನೆಂಟು ಹತ್ತೊಂಭತ್ತನೆಯ ಶತಮಾನಗಳು ನಾಡಿನಲ್ಲಿ ಐರೋಪ್ಯರು ವಸಾಹತುಗಳನ್ನು ಸ್ಥಾಪಿಸಿ, ಭಾರತದ ರಾಜಕೀಯ ಸ್ವಾತಂತ್ರ್ಯವನ್ನು ಕಿತ್ತುಕೊಂಡು ಭಾರತೀಯರನ್ನು ಗುಲಾಮರನ್ನಾಗಿಸಿದ ಕರಾಳ ಇತಿಹಾಸವಾಗಿತ್ತು. ಇದು ರಾಜಕೀಯರಂಗದ ಗೋಳಾದರೆ ಸಾಮಾಜಿಕ ಕ್ಷೇತ್ರದು ಇನ್ನು ನೋವಿನ ಕತೆಯಾಗಿತ್ತು. ಆ ಕಾಲದಲ್ಲಿ ಜಾತಿಯಲ್ಲಿ ಹಿಂದುಳಿದ ವರ್ಗದವರ ಶೋಷಣೆಯೇ ನಡೆದಿತ್ತು.

ಕೇರಳದ ಬಹುಸಂಖ್ಯಾತ ಈಳವ ಜನಾಂಗದವರು ಕೂಡಾ ಅಸ್ಪೃಶ್ಯ ವರ್ಗಕ್ಕೆ ಸೇರಿದ್ದರು. ದೇವಾಲಯದಲ್ಲಿ ಪವೇಶವಿರಲಿಲ್ಲ, ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿಲ್ಲ, ಮಹಿಳೆಯರು ಕುಪ್ಪಸ್ಸ ತೊಡುವಂತಿರಲಿಲ್ಲ, ಆಭರಣ ಧರಿಸುವಂತೆಯೇ ಇರಲಿಲ್ಲ, ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ. ಅವಿದ್ಯೆಯಿಂದಾಗಿ ಸಾಮಾಜಿಕವಾಗಿ ಕ್ರೂರ ಶೋಷಣೆಗೆ ಒಳಗಾದ ಈಳವರಿಗೆ ತಮ್ಮ ದುಃಸ್ಥಿತಿಯ ಅರಿವೂ ಕೂಡಾ ಇರಲಿಲ್ಲ. ಈ ಮೌಡ್ಯತೆಯನ್ನು ಕಂಡ ಸ್ವಾಮಿ ವಿವೇಕಾನಂದರೇ “ಕೇರಳವೊಂದು ಹುಚ್ಚರ ಆಸ್ಪತ್ರೆ ” ಎಂಬ ಉದ್ಗಾರ ತೆಗೆದಿದ್ದರು ಎಂದು ಹೇಳಿದರು.

ಗುರುಗಳು ಸದಾ ಸಮಾಜದ ಕಂದಾಚಾರ, ಮೂಢನಂಬಿಕೆಗಳನ್ನು, ಅವಿಚಾರಗಳನ್ನು ಗಳಿಗೆಯಿಂದಲೇ ಟೀಕಿಸಿ ಸರಿಪಡಿಸುತ್ತಿದ್ದರು. ಹಸಿದವರು, ಬಳಲಿದವರು, ದೀನದಲಿತರನ್ನು ಕಂಡರೆ ಅವರಿಗೆ ಎಲ್ಲಿಲ್ಲದ ಪ್ರೀತಿ ತುಂಬಿಕೊಂಡಿತ್ತು. ಆತ್ಮ ಜ್ಞಾನಕ್ಕಿಂತ ದೊಡ್ಡ ಜ್ಞಾನವಿಲ್ಲ, ವಿದ್ಯೆಯನ್ನು ಪಡೆದು ಸ್ವತಂತ್ರರಾಗಿರಿ, ಸಂಘಟನೆಯಿಂದ ಶಕ್ತಿವಂತರಾಗಿರಿ ಎಂದು ಸಂದೇಶ ಸಾರಿದ್ದಾರೆ. ಮನುಷ್ಯ ಜಾತಿಯಿಂದ ದೊಡ್ಡವನಾಗುವುದಿಲ್ಲ ಬದಲಾಗಿ ಆತ ಬದುಕುವ ನೀತಿಯಿಂದ, ರೀತಿಯಿಂದ ದೊಡ್ಡವನಾಗುತ್ತಾನೆ ಎಂದರು.

ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ ಮಾತನಾಡಿ, ನಾರಾಯಣ ಗುರುಗಳು ಕೇವಲ ಒಂದು ಜನಾಂಗದ ಗುರು ಅಲ್ಲ, ಮಾನವ ಜನಾಂಗದ ಗುರು, ವಿಶ್ವಮಾನವ ಗುರು, ಸಾಮಾಜಿಕ ಕ್ರಾಂತಿಯ ಹರಿಕಾರ. ಇವರು ಆಧ್ಯಾತ್ಮಿಕ ಚಿಂತನೆಯ ಮೂಲಕ ಮತಾಂತರವನ್ನು ತಪ್ಪಿಸಿ ದೇಶದ ಸಂಪ್ರದಾಯವನ್ನು ಉಳಿಸಿ ಸಮಾನತೆಯನ್ನು ತರುವನಿಟ್ಟಿನಲ್ಲಿ ಮಹಾ ಕ್ರಾಂತಿಕಾರಿ ಹೋರಾಟ ಮಾಡಿದ್ದಾರೆ ಎಂದರು.

ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ ಚನ್ನಪ್ಪ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮ ಇಡೀ ಜೀವನವನ್ನು ಹಿಂದುಳಿದ ಹಾಗೂ ಶೋಷಿತ ವರ್ಗದವರ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾಪುರುಷ, ಗಾಂಧೀಜಿಯವರು ಕೂಡ ತಮ್ಮ ಹರಿಜನೋದ್ಧಾರಕ್ಕಾಗಿ ಸ್ಪೂರ್ತಿ ಪಡೆದಿದ್ದು ಗುರುಗಳಿಂದ. ನಾರಾಯಣ ಗುರುಗಳ ಸಾಮಾಜಿಕ ಕಾರ್ಯಕ್ರಮಗಳಿಗೂ ಗಾಂಧೀಜಿಯವರ ಸಾಮಾಜಿಕ ಚಟುವಟಿಕೆಗಳಿಗೂ ಬಹಳಷ್ಟು ಹೋಲಿಕೆ ಇರುವುದನ್ನು ನಾವು ಕಾಣಬಹುದು ಎಂದರು.

ಕಾರ್ಯಕ್ರಮದಲ್ಲಿ ವೇಳೆ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್, ಸಮಾಜದ ಅಧ್ಯಕ್ಷ ಶಂಕರ್, ಕಾರ್ಯದರ್ಶಿ ನಾಗರಾಜ್ ಮಾತನಾಡಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಮುಖಂಡರಾದ ದೇವೇಂದ್ರಪ್ಪ, ರವೀಂದ್ರ ಬಾಬು, ಸತೀಶ್, ಹನುಮಂತಪ್ಪ ಹಾಗೂ ಸಂಘಟನೆಯ ಮಹಿಳಾ ಪದಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top