ದಾವಣಗೆರೆ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರೆ 04ರಲ್ಲಿ ದಾವಣಗೆರೆ-ಚಿತ್ರದುರ್ಗ ಮಾರ್ಗ ತಡೆದು ರೈತರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ರೈತರು ಕೇಂದ್ರ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗುತ್ತಿದ್ದಾರೆ. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು
ದಾವಣಗೆರೆ ಹೊರ ಹೊಲಯದಲ್ಲಿ ರಸ್ತೆ ತಡೆ ನಡೆಸಿದ್ದರಿಂದ ಕಿ.ಮೀ.ಗಟ್ಟಲೇ ವಾಹನಗಳ ಹೆದ್ದಾರಿಯಲ್ಲಿ ನಿಂತಿವೆ. ಈ ವೇಳೇ ರೈತರು ಮತ್ತು ವಾಹನ ಸವಾರರ ನಡುವೆ ವಾಕ್ಸಮರ ನಡೆಯಿತು. ಟ್ರ್ಯಾಕ್ಟರ್ ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ರೈತರು ಆಕ್ರೋಶ ಹೊರ ಹಾಕಿದರು. ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿತ್ತು. ಮಧ್ಯಾಹ್ನ 12.30ರಿಂದ 3 ಗಂಟೆ ವರೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಲಿವೆ .



