ದಾವಣಗೆರೆ: 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ರಾಜ್ಯ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಅಧ್ಯಕ್ಷರಾದ ಸುರೇಶ್ ಇಟ್ನಾಳ್ ಹಾಗೂ ನೋಡಲ್ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಸಿಂಧು.ಜಿ.ಎನ್ ಸರ್ಕಾರಿ ಪ್ರೌಢಶಾಲೆ, ಮೆಳ್ಳೆಕಟ್ಟೆ ಪ್ರಬಂಧ ಸ್ಪರ್ಧೆ(ಕನ್ನಡ) ಪ್ರಥಮ ಸ್ಥಾನ, ಗಾನಶ್ರೀ.ಜಿ.ರಾಯ್ಕರ್ ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ದಾವಣಗೆರೆ. ಪ್ರಬಂಧ ಸ್ಪರ್ಧೆ(ಇಂಗ್ಲಿಷ್) ದ್ವಿತೀಯ, ವೀರಭದ್ರಸ್ವಾಮಿ.ಜಿ.ಎಂ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ, ಹೊನ್ನಾಳಿ ಇವರು ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇದೇ ಜನವರಿ 25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.



