ದಾವಣಗೆರೆ: ಸೆ. 12 ರಂದು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ನೀಟ್ (ಯುಜಿ)-2021 ರ ಸಾಮಾನ್ಯ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದರನ್ವಯ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕು. ಈ ಆದೇಶವು ಪರೀಕ್ಷಾರ್ಥಿಗಳು, ಪರೀಕ್ಷೆ ಕರ್ತವ್ಯ ನಿರ್ವಹಿಸಲು ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.



