ದಾವಣಗೆರೆ: ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇಂದು ( ಜು.6) ಹಿಂದಿನ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಡಾ; ಗಂಗಾಧರಸ್ವಾಮಿ ಅವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಡಾ.ಜಿ.ಎಂ.ಗಂಗಾಧರಸ್ವಾಮಿ ಅವರನ್ನು ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜಿಲ್ಲಾಧಿಕಾರಿಯಾಗಿದ್ದ ಎಂ.ವಿ.ವೆಂಕಟೇಶ್ ವರ್ಗಾವಣೆಯಾಗಿದ್ದಾರೆ.