Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯ ಶಿವಾಜಿ ನಗರ ಪ್ರದೇಶಕ್ಕೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ನಿಯಮಾನುಸಾರ ನಿಗಧಿತ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಾಜಿ ನಗರ ಪ್ರದೇಶದಲ್ಲಿ 21 ಅಂತ್ಯೋದಯ, 652 ಬಿಪಿಎಲ್ ಮತ್ತು 12 ಎಪಿಎಲ್ ಒಳಗೊಂಡಂತೆ ಒಟ್ಟು 673 ಪಡಿತರ ಚೀಟಿಗಳು ಇದ್ದು, ಒಂದು ತಿಂಗಳ ಪಡಿತರ ಎತ್ತುವಳಿಗೆ ಕನಿಷ್ಠ 50.000 ಮೊತ್ತದ ಅಗತ್ಯವಿರುತ್ತದೆ.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆ, ಸಹಕಾರ ಸಂಘಗಳಾದ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ(ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೋಂದಾಯಿತ ಸಹಕಾರ ಸಂಘ, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘ, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ವಿವಿಧೋದ್ದೇಶ ಸಹಕಾರ ಸಂಘ, ಅಂಗವಿಕಲರ ಕಲ್ಯಾಣ ಸಹಕಾರ ಸಂಘ ಹಾಗೂ ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್; ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೋರಡಿಸಿದ 30 ದಿನಗಳೊಳಗಾಗಿ ಉಪನಿರ್ದೇಶಕರು, ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ (ಜಿಲ್ಲಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 4) ಇವರಿಂದ ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top