ದಾವಣಗೆರೆ: ಜಿಲ್ಲೆಯ ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನೂತನ ಸರ್ಕಾರ ಬಂದ ನಂತರ ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಅವರನ್ನು ಕಲಬುರ್ಗಿ ಜಿಲ್ಲೆಯ ಪೊಲೀಸ್ ತರಬೇತಿ ಕೇಂದ್ರದ ಮುಖ್ಯಸ್ಥರಾಗಿ ನೇಮಕ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಇದೀಗ ಒಂದು ತಿಂಗಳ ನಂತರ ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ನೇಮಿಸಲಾಗಿದೆ. ಉಮಾ ಪ್ರಶಾಂತ್ ಈ ಮೊದಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದರು.
ಡಾ. ಅರುಣ್ ದಾವಣಗೆರೆ ಜಿಲ್ಲೆಗೆ ಕಳೆದ ಏಪ್ರಿಲ್ ತಿಂಗಳಿನಲ್ಲಿ ದಾವಣಗೆರೆ ಎಸ್ ಪಿ ಆಗಿ ಬಂದಿದ್ದರು, ಕೇವಲ 5 ತಿಂಗಳೊಳಗೆ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು.



