ದಾವಣಗೆರೆ: ಹೊಸ ವರ್ಷಾಚರಣೆಗೆ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್; ಸಿಸಿಟಿವಿ ಅಳವಡಿಕೆ, ಸಮಯ ನಿಗದಿ ಕಡ್ಡಾಯ; ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಎಚ್ಚರಿಕೆ..!ದಾವಣಗೆರೆ: ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ
ಕಾನೂನು & ಸುವ್ಯವಸ್ಥೆ ಕಾಪಾಡುವ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.
ದಿನಾಂಕ: 31-12-2024 ರಂದು ರಾತ್ರಿ 2025 ನೇ ಸಾಲಿನ ಈ ಹೊಸ ವರ್ಷ ಆಚರಣೆ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹೊಸ ವರ್ಷಾಚರಣೆ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಆಯೋಜಕರು, ಸಂಘಟನೆಗಳು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳು
- 01) ನಗರದ ವಿವಿಧ ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಕುಡಿದು ವಾಹನಗಳನ್ನು ಚಾಲನೆ ಮಾಡುವವರ,ತ್ರಿಬಲ್ ರೈಡಿಂಗ್ ಹಾಗೂ ವೀಲಿಂಗ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು
- 02) ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು,ನ್ಯಾಮತಿ ಪಟ್ಟಣಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ
- 03) ದಾವಣಗೆರೆ ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಪೊಲೀಸ್ ಅಧಿಕಾರಿ -ಸಿಬ್ಬಂದಿಗಳನ್ನು
ನಿಯೋಜಿಸಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ
- 04) ಜಿಲ್ಲೆಯಲ್ಲಿ ಬಾರ್ & ರೆಸ್ಟೋರೆಂಟ್, ವೈನ್ ಶಾಪ್‌ಗಳು ನಿಗಧಿಪಡಿಸಿದ ಸಮಯಕ್ಕೆ ಬಂದ್ ಮಾಡಲು ಸೂಚಿಸಲಾಗಿದೆ.
- 05) ನಗರದ ಹೊರ ವಲಯಗಳಾದ ಕೊಂಡಜ್ಜಿ ಕೆರೆ, ದೇವರಬೆಳಕೆರೆ ಚೆಕ್ ಡ್ಯಾಂ ಮತ್ತು ಇತರೆ ಹೊರ ಬಾಗಗಳಲ್ಲೂ
ಪೊಲೀಸ್ ನಿಯೋಜನೆ ಮಾಡಲಾಗಿದೆ.
- 06) ಹೊಸ ವರ್ಷಾಚರಣೆ ಆಚರಣೆ ಕಾರ್ಯಕ್ರಮಗಳ ಆಯೋಜಕರುಗಳಿಗೆ ಈಗಾಲೇ ಯಾವುದೇ ಅವಘಡಗಳಿಗೆ
ಅವಕಾಶವಿರದಂತೆ ಸೂಕ್ತ ಪೂರ್ವ ಸಿದ್ಧತೆಗಳನ್ನು & ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಗಳನ್ನುನೀಡಲಾಗಿರುತ್ತದೆ
- 07) ದಾವಣಗೆರೆ ನಗರದಲ್ಲಿ ಅಗತ್ಯವಿದ್ದ ಸೂಕ್ಷ್ಮ ಪ್ರದೇಶ ಕಡೆಗಳಲ್ಲಿ ಡೋನ್ ನಿಗಾವಹಿಸಲಾಗುವುದು.
ಹೊಸ ವರ್ಷಾಚರಣೆಯಲ್ಲಿ ಪಾಲಿಸಬೇಕಾದ ಸೂಚನೆಗಳು
- ಕಾರ್ಯಕ್ರಮದ ಆಯೋಜಕರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ಮುಕ್ತಾಯ
ಮಾಡುವುದು.
- ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿ, ಕುಡಿದು ವಾಹನ ಚಾಲನೆ
ಮಾಡುವುದು, ವಾಹನಗಳಲ್ಲಿ ಹೆಚ್ಚಿನ ಜನರು ಸವಾರಿ ಮಾಡಬಾರದು, ವೀಲಿಂಗ್ ಮಾಡುವುದು ಮಾಡಬಾರದು
- ಅಕ್ಕಪಕ್ಕದ ಜನರಿಗೆ ತೊಂದರೆ ಆಗದಂತೆ ವಿಶೇಷವಾಗಿ ಆಸ್ಪತ್ರೆಗಳು,
ಅಪಾರ್ಟ್‌ಮೆಂಟ್‌ಗಳ ಸುತ್ತಮುತ್ತ ಮತ್ತು ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ/ಹೆಣ್ಣು ಮಕ್ಕಳಿಗೆ, ವಿದ್ಯಾರ್ಥಿಗಳಿಗೆ
ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು
-
ಯುವಕರು ಅಶ್ಲೀಲವಾಗಿ, ಅಸಭ್ಯವಾಗಿ ವರ್ತನೆ ಮಾಡಿದರೆ ಹಾಗೂ ವಿಶೇಷವಾಗಿ ಹೆಣ್ಣು
ಮಕ್ಕಳಿಗೆ ಚುಡಾಯಿಸುವುದು, ದಾಂದಲೇ ನಡೆಸುವುದು, ಮಹಿಳೆಯರಿಗೆ ತೊಂದರೆ ಉಂಟುಮಾಡುವುದು ಕಂಡು ಬಂದರೆ
ಅಂತವರ ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು
- ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮಧ್ಯ ನಶೆಯಲ್ಲಿ ಆಚರಣೆ ಮಾಡಿ ಸಾರ್ವಜನಿಕರಿಗೆ ಶಾಂತಿಗೆ
ತೊಂದರೆ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು
- ಹೊಸ ವರ್ಷಾಚರಣೆ ಆಚರಣೆ ಕಾರ್ಯಕ್ರಮಗಳ ಆಯೋಜಕರುಗಳು ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸಬೇಕು
ಸಾರ್ವಜನಿಕರು ಮುಖ್ಯವಾಗಿ ಯುವಕರು ಬೇರೆಯವರಿಗೆ ತೊಂದರೆಯಾಗದ ರೀತಿಯಲ್ಲಿ ಹೊಸ ವರ್ಷಾಚರಣೆ
ಮಾಡಲು ಸೂಚಿಸಿದೆ.
- ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಜೋರಾಗಿ
ಕೂಗುವುದು, ಕಿರಿಚುವುದನ್ನು ನಿಷೇಧಿಸಿಲಾಗಿದ್ದು, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು ಹಾಗೂ ಯಾವುದೇ ಅಗ್ನಿಅವಘಡಗಳು
ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು.
-
ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ
ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳು ಸುದ್ದಿ ಹರಡುವುದು, ಕಾನೂನು
ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್‌ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ
ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
- ಕರ್ಕಶವಾದ ಶಬ್ದವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆ ಆಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕಗಳನ್ನು ಬಳಸುವುದು. ಉಲ್ಲಂಘಿಸಿದ್ದಲ್ಲಿ ಕಾನೂನು
ರಿತ್ಯಾ ಕ್ರಮ ಕೈಗೊಳ್ಳಲಾಗುವುದು.
- ನೈತಿಕ ಪೊಲೀಸ್ ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು
- ಹೊಸ ವರ್ಷದ ಆಚರಣೆ ನಡೆಸುವ ಆಯೋಜಕರು ವಾಹನಗಳ ಪಾರ್ಕಿಂಗ್ ಗೆ ಪ್ರತ್ಯೇಕ ವ್ಯವಸ್ಥೆಮಾಡಿಕೊಳ್ಳುವುದು