ದಾವಣಗೆರೆ: ದಾವಣಗೆರೆ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಉಪ ವಿಭಾಗ ಅಧಿಕಾರಿ ಕಚೇರಿ (ಎಸಿ) ಜಾಗವನ್ನು ರೈಲ್ವೆ ಇಲಾಖೆಗೆ ನೀಡಲಾಗುವುದು. ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಹೊಸದಾಗಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ಸಿದ್ಧವಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಎಸಿ ಕಚೇರಿ ನಿರ್ಮಿಸಲು ಸಿಎಂ ಯಡಿಯೂರಪ್ಪ 5 ಕೋಟಿ ಮಂಜೂರು ಮಾಡಿದ್ದಾರೆ. ಸದ್ಯ ಒಂದುವರೆ ತಿಂಗಳು ಎಸಿ ಕಚೇರಿಯನ್ನು ಬೇರೆ ಕಡೆ ಸ್ಥಳಾಂತ ಮಾಡಲಾಗುವುದು ಎಂದರು.
ನಗರದ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಎಸಿ ಕಚೇರಿ ಜಾವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು. ಈ ಜಾಗದಲ್ಲಿ ರೈಲ್ವೆ ಇಲಾಖೆ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಿದೆ. 100 ಕಾರ್ , 300 ಬೈಕ್ ಹಾಗೂ 20 ಆಟೋ ಗಳು ನಿಲ್ಲುವಷ್ಟು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.



