Connect with us

Dvgsuddi Kannada | online news portal | Kannada news online

ಕ್ರಿಸ್‍ಮಸ್,  ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ: ಪಾರ್ಟಿ ಆಯೋಜನೆಗೆ ಬ್ರೇಕ್;  ಮಾರ್ಗಸೂಚಿ ಉಲ್ಲಂಘಿಸಿದರೆ ಶಿಸ್ತು ಕ್ರಮ: ಜಿಲ್ಲಾಧಿಕಾರಿ

davangere dc sp

ದಾವಣಗೆರೆ

ಕ್ರಿಸ್‍ಮಸ್,  ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ: ಪಾರ್ಟಿ ಆಯೋಜನೆಗೆ ಬ್ರೇಕ್;  ಮಾರ್ಗಸೂಚಿ ಉಲ್ಲಂಘಿಸಿದರೆ ಶಿಸ್ತು ಕ್ರಮ: ಜಿಲ್ಲಾಧಿಕಾರಿ

ದಾವಣಗೆರೆ:  ರಾಜ್ಯದಲ್ಲಿ ಕೋವಿಡ್ 19 ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದು ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯ ಮಟ್ಟದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು ಜಿಲ್ಲೆಗೂ ಅನ್ವಯಿಸಲಿದ್ದು, ಜಿಲ್ಲೆಯಾದ್ಯಂತ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಕೋವಿಡ್ 19 ಸೋಂಕು ಹರಡುವಿಕೆ ನಿಯಂತ್ರಿಸುವ ಸಂಬಂಧದಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಕಂಡುಬಂದಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‍ಮಸ್ ಹಾಗೂ ಹೊಸವರ್ಷವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದೆ.  ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಮತ್ತು ಪಬ್, ಬಾರ್, ರೆಸ್ಟೋರೆಂಟ್, ರೆಸಾರ್ಟ, ಕ್ಲಬ್ ಹಾಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ.

ಕ್ರಿಸ್‍ಮಸ್ ಆಚರಣೆ ಮಾರ್ಗಸೂಚಿ: ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಗಳು ಇತ್ಯಾದಿಗಳನ್ನು ಕೋವಿಡ್ ಸಮುಚಿತ ವರ್ತನೆ ಅನುಸರಿಸಬೇಕು. ಆಚರಣೆಗಳು ಅಥವ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು ರಸ್ಥೆಗಳು, ಉದ್ಯಾನವನಗಳನ್ನು ಬಳಸುವಂತಿಲ್ಲ.ಹೊಸ ವರ್ಷಾಚರಣೆ ಮಾರ್ಗಸೂಚಿ: ಈ ಮಾರ್ಗಸೂಚಿಯು ಡಿಸೆಂಬರ್ 30 ರಿಂದ ಜನವರಿ 02 ರವರಗೆ ಜಾರಿಯಲ್ಲಿರುತ್ತದೆ.

ಕ್ಲಬ್‍ಗಳು, ಪಬ್‍ಗಳು, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ, ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರುವುದಿಲ್ಲ. ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸಬಾರದು. ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ಕ್ಲಬ್‍ಗಳು, ಪಬ್‍ಗಳು ಎಂದಿನಂತೆ ಕೋವಿಡ್ ಸಮುಚಿತ ವರ್ತನೆಯೊಂದಿಗೆ ಸಿಬ್ಬಂದಿಗಳು ಆರ್‍ಟಿಪಿಸಿಆರ್ ನೆಗೆಟಿವ್ ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವ ಮೂಲಕ ಕಾರ್ಯನಿರ್ವಹಿಸಬಹುದು.

ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು ಕ್ಲಬ್‍ಗಳು, ಪಬ್‍ಗಳಿಗೆ ಪ್ರವೇಶ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಪ್ರದರ್ಶಿಸಿದ ನಂತರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು. ಅಪಾರ್ಟ್‍ಮೆಂಟ್ ಅಸೋಷಿಯೇಶನ್ ಗೆ ಸಂಭಂಧಪಟ್ಟಂತೆ ಸಾಮಾಜಿಕ ಅಂತರ ಹಾಗೂ ಕೋವಿಡ್ ಸಮುಚಿತ ವರ್ತನೆಯೊಂದಿಗೆ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ. ಆದರೆ ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಪ್ಲೋರ್‍ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ. ಈ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಸಂಘಟಕರು ಜವಾಬ್ದಾರರಾಗಿರುತ್ತಾರೆ.

ಸರ್ಕಾರ ಕಳೆದ ಡಿ. 03 ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ಕೂಡ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು, ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಸರ್ಕಾರದ ಮಾರ್ಗಸೂಚಿ, ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ ಪಕ್ಷದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top