ದಾವಣಗೆರೆ: ಜಿಲ್ಲೆಯಾದ್ಯಾಂತ ಅಕ್ಟೋಬರ್ 11 ರವರೆಗೆ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ 2ನೇ ಅಲೆಯ ನಿಯಂತ್ರಣಕ್ಕಾಗಿ ಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ ತಪ್ಪಿಸಲು ಹಾಗೂ ನಿಯಂತ್ರಣ ಕಾರ್ಯ ಕೈಗೊಳ್ಳಲು ಸರ್ಕಾರ ಕಳೆದ ಜುಲೈ 3 ರಂದು ಹೊರಡಿಸಿದ್ದ ಮಾರ್ಗಸೂಚಿಗಳೊಂದಿಗೆ ಹೆಚ್ಚುವರಿಯಾಗಿ ಹಾಗೂ ಸೆಪ್ಟೆಂಬರ್ 24 ರ ನಿರ್ಬಂಧದ ಆದೇಶವನ್ನು ಒಳಗೊಂಡು, ರಾತ್ರಿ ಕರ್ಫ್ಯೂವನ್ನು ಅಕ್ಟೋಬರ್ 11 ರವರೆಗೆ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ವಿಸ್ತರಿಸಲಾಗಿದೆ.
ಸರ್ಕಾರದ ಮಾರ್ಗಸೂಚಿ, ನಿರ್ಬಂಧಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005, ಐ.ಪಿ.ಸಿ ಸೆಕ್ಷನ್ 188 ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ ಇವುಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.