Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಅಪರೂಪದ ನೋಟು-ನಾಣ್ಯ ಪ್ರದರ್ಶನ

ದಾವಣಗೆರೆ

ದಾವಣಗೆರೆ: ಇಂದು ಅಪರೂಪದ ನೋಟು-ನಾಣ್ಯ ಪ್ರದರ್ಶನ

ದಾವಣಗೆರೆ: ರೋಟರಿ ಕ್ಲಬ್‌ನಿಂದ ಮಾ.6, 7ರಂದು ಇಲ್ಲಿನ ಎಂಸಿಸಿ ‘ಎ’ ಬ್ಲಾಕ್‌ನಲ್ಲಿನ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್‌ನ ಸಮುದಾಯ ಭವನದಲ್ಲಿ ಅಪರೂಪದ ನೋಟುಗಳು ಹಾಗೂ ನಾಣ್ಯಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಬೆಳಿಗ್ಗೆ 11ಕ್ಕೆ ಮೇಯರ್ ಎಸ್.ಟಿ. ವೀರೇಶ್ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ತಹಶೀಲ್ದಾರ್ ಗಿರೀಶ್, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೊಂದು ಅಪೂರ್ವ ಪ್ರದರ್ಶನವಾಗಿದ್ದು, ಬೆಳಗಾವಿಯ ಈರಪ್ಪ ಗುರುಲಿಂಗ ಪರಮಶೆಟ್ಟಿ ಅವರು 5 ದಶಕಗಳಿಂದ ಸಂಗ್ರಹಿಸಿರುವ ಅಪರೂಪದ ನೋಟುಗಳು ಹಾಗೂ ನಾಣ್ಯಗಳು ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನಗೊಂಡಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top