Connect with us

Dvg Suddi-Kannada News

ದಾವಣಗೆರೆ: OBC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: OBC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ: ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಕೆಲವೊಂದು ವಿಶ್ವವಿದ್ಯಾಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಾಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಹಾಗೂ ಕೋವಿಡ್-19 ಹಿನ್ನೇಲೆಯಲ್ಲಿ ಮೇ.24 ರವರೆಗೆ ರಾಜ್ಯದಂತ ಲಾಕ್‍ಡೌನ್ ಘೋಷಣೆಯಾಗಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿರುವುದರಿಂದ ವಿದ್ಯಾರ್ಥಿಗಳು ಇ-ಅಟೆಷ್ಟೆಷನ್ ಮಾಡಿಸುವುದು ಕಷ್ಟ ಸಾಧ್ಯವಾಗಿರುತ್ತದೆ. ಅದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮೇ.31 ರವರೆಗೆ ವಿಸ್ತರಿಸಲಾಗಿದೆ.

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸಇಲಾಖಾ ಸಹಾಯವಾಣಿಯ 8050770005/8050770004 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top