ದಾವಣಗೆರೆ: ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನವಾಗುತ್ತಿರುವ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ (Palm crop) ಯೋಜನೆ ಅಡಿ ತಾಳೆ ಕೃಷಿ ಉತ್ತೇಜಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ನಾಟಿ ಮಾಡಲು ರೈತರಿಗೆ ಉಚಿತವಾಗಿ ಸಸಿಗಳನ್ನು ನೀಡಲಾಗುತ್ತಿದ್ದು, ಕೊಯ್ಲಿನವರೆಗೂ ವಿವಿಧ ಘಟಕದಡಿ ತೋಟಗಾರಿಕೆ ಇಲಾಖೆಯಿಂದ ಸಹಾಯಧನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತೋಟಗಾರಿಕೆ ಇಲಾಖೆಗೆ ಹಾಗೂ ಕಲ್ಪವೃಕ್ಷ ಆಗ್ರಿ ಟೆಕ್ ಕಂಪನಿ ಲಿಮಿಟೆಡ್, ಕುರುಬರಹಳ್ಳಿ, ಹರಿಹರ ತಾ ದಾವಣಗೆರೆಗೆ ಭೇಟಿ ನೀಡಬಹುದೆಂದು ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.



