Connect with us

Dvgsuddi Kannada | online news portal | Kannada news online

ದಾವಣಗೆರೆ; ಮತ್ತೆ ಚುರುಕು ಪಡೆದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ; ನ.10 ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

IMG 20231102 172802

ದಾವಣಗೆರೆ

ದಾವಣಗೆರೆ; ಮತ್ತೆ ಚುರುಕು ಪಡೆದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ; ನ.10 ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ದಾವಣಗೆರೆ: ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಚಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದೆ. ನವೆಂಬರ್ 10 ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಮಾಡ್ತೇವೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ಎ ಮೀಸಲಾತಿ ಜೊತೆ ಲಿಂಗಾಯತ ಉಪ ಪಂಗಡ ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸ್ತೇವೆ. ಹಿಂದಿನ ಸರ್ಕಾರ ಮೀಸಲಾತಿ ಘೋಷಣೆ ಮಾಡಿತು. ಆದರೆ ನೀತಿ ಸಂಹಿತೆ ಹಿನ್ನಲೆ ಜಾರಿಯಾಗಲಿಲ್ಲ. 2ಡಿ ಮೀಸಲಾತಿ ಆಗ ಅನುಷ್ಠಾನಕ್ಕೆ ಮಾಡಲು ಸಾಧ್ಯವಾಗಲಿಲ್ಲ. ಈಗಿನ ಸರ್ಕಾರಕ್ಕೂ ಕೂಡ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಲಾಗುವುದು ಎಂದರು.

ಹೋರಾಟ ಮೂಲಕ ಮೀಸಲಾತಿ ಪಡೆಯಬೇಕು. ಈಗಿನ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಾಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂತು ಇಷ್ಟಲಿಂಗ ಪೂಜೆ ಮಾಡಿ ಹೋರಾಟ ಆರಂಭಿಸ್ತೇವೆ. ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿ ಎಂದು ಮನವಿ ಮಾಡುತ್ತೇವೆ.ಲೋಕಸಭಾ ಚುನಾವಣೆಯ ಒಳಗೆ ನಮಗೆ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಲೋಕಸಭಾ ಚುನಾವಣೆಗೆ ಬಹಳ ಹೊಡೆತ ಬೀಳುತ್ತದೆ. ಎಲ್ಲಾ ಕಡೆ ಸಭೆ ಮಾಡಿ‌ ಜಾಗೃತಿ ಮೂಡಿಸುತ್ತೇವೆ ಎಂದರು.

ಸರ್ಕಾರ ಜಾತಿ ಗಣತಿ ಬಿಡುಗಡೆ ಬಗ್ಗೆ ನಮ್ಮ ವಿರೋಧವಿಲ್ಲ.ಆದರೆ, ಲಿಂಗಾಯತ, ಒಕ್ಕಲಿಗ ಸಮಾಜದ ಜನರಲ್ಲಿ ಆತಂಕ ಇದೆ. ಸರ್ಕಾರ ಎರಡು ಸಮಾಜದ ಶಾಸಕರನ್ನು ಸೇರಿಸಿ ಸಭೆ ಮಾಡಿ ಮನವರಿಕೆ ಮಾಡಿಕೊಳ್ಳಲಿ. ಲಿಂಗಾಯತ ಒಳ ಪಂಗಡದವರು ಎಲ್ಲಿ ಸೌಲಭ್ಯ ಕಟ್ ಆಗುತ್ತದೆ ಎಂದು ಲಿಂಗಾಯತ ಎಂದು ಬರೆಸಿಲ್ಲ. ಇದರಿಂದ ಸಂಖ್ಯೆ ಕಡಿಮೆಯಾಗಿರುವ ಆತಂಕವಿದೆ.

2ಎ ಮೀಸಲಾತಿ ಬಗ್ಗೆ ಜಯಪ್ರಕಾಶ್ ಹೆಗಡೆಯವರ ಮಧ್ಯಂತರ ವರದಿ ನಮ್ಮ‌ಪರವಾಗಿ ಬಂದಿದೆ. 2ಎ ಮೀಸಲಾತಿಯಿಂದ ಯಾವ ಜಾತಿಗಳಿಗೂ ಅನ್ಯಾಯವಾಗಲ್ಲ. ಯಾರಿಗೂ ಅನ್ಯಾಯ ವಾಗದಂತೆ ಮೀಸಲಾತಿ ನೀಡಿ ಎಂದು ಆಗ್ರಹಿಸಿದರು.

ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ; ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಫ್ರೀ ಟ್ರಾನ್ಸ್ ಫಾರ್ಮರ್‌ ಸಿಗಲ್ಲ….!

 

ಇನ್ಮುಂದೆ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರ; ಜಾತಿ ಮತ್ತು ಆದಾಯಪ್ರಮಾಣ ಪತ್ರ ಸೇರಿ 44 ಸೇವೆ ಲಭ್ಯ; ದರ ಪಟ್ಟಿ ಪ್ರಕಟಿಸಿ ಸರ್ಕಾರ ಸುತ್ತೋಲೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top