Connect with us

Dvgsuddi Kannada | online news portal | Kannada news online

ದಾವಣಗೆರೆ: ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ  ಕ್ಷೇತ್ರಾಧ್ಯಯನ  

ದಾವಣಗೆರೆ

ದಾವಣಗೆರೆ: ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ  ಕ್ಷೇತ್ರಾಧ್ಯಯನ  

ದಾವಣಗೆರೆ:  ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಗಳ 2ಎ ಪಟ್ಟಿಗೆ ಸೇರಿಸುವ ಸಲುವಾಗಿ ಪಂಚಮಸಾಲಿ ಸಮಾಜದವರು ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಸಂಬಂಧ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಹಾಗೂ ಅನಾಥಾಶ್ರಮಗಳಲ್ಲಿರುವ ಮಕ್ಕಳನ್ನು ಭೇಟಿ ಮಾಡಿ ಅವರ ಶೈಕ್ಷಣಿಕ ಸೌಲಭ್ಯಕ್ಕಾಗಿ ಅವರು ಯಾವ ಸಮುದಾಯಗಳಿಗೆ ಸೇರುತ್ತಾರೆಂಬುದನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಮಾಡಲಾಗುವುದೆಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಹೇಳಿದರು.

ನಗರದ ಸಕ್ರ್ಯೂಟ್ ಹೌಸ್ ನಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಂಚಮಸಾಲಿ ಸಮಾಜ ಹಿಂದುಳಿದ ವರ್ಗಗಳ 3ಬಿ ಪಟ್ಟಿಯಲ್ಲಿದ್ದು, 2ಎ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕೆಲವು ಸಮಾಜಗಳು ಪಂಚಮಸಾಲಿ ಸಮಾಜವನ್ನು 2ಎ ಪಟ್ಟಿಗೆ ಸೇರಿಸಬಾರದಾಗಿ ಮನವಿ ನೀಡಿರುತ್ತಾರೆ. ಹಾಗಾಗಿ ಪಂಚಮಸಾಲಿ ಸಮಾಜವನ್ನು ಈ ಸಮಾಜದವರು ವಾಸಿಸುವ ಪ್ರದೇಶ, ಕುಲ ಕಸುಬು ಮತ್ತು ಅವರುಗಳ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡಲಾಗುವುದು. ಈಗಾಗಲೇ ಎರಡು ಬಾರಿ ಪಂಚಮಸಾಲಿ ಮುಖಂಡರುಗಳೊಂದಿಗೆ ಸಾರ್ವಜನಿಕ ವಿಚಾರಣೆ ಸಭೆ ನಡೆಸಲಾಗಿದ್ದು, ರಾಜ್ಯದ 8 ರಿಂದ 9 ಜಿಲ್ಲೆಗಳಲ್ಲಿ ಅವರುಗಳು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಲಾಗುವುದು. ಇಂದಿನಿಂದ ಡಿ. 23 ರವರಗೆ ದಾವಣಗೆರೆ ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಭೇಟಿ ನಡೆಸಲಾಗುವುದು ಎಂದರು.

ವರದಿ ನೀಡಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಈ ಹಿಂದೆ ರಚಿಸಲಾಗಿದ್ದ ಆಯೋಗಗಳು ನೀಡಿರುವ ವರದಿಗಳನ್ನು ಅಧ್ಯಯನ ಮಾಡಲಾಗುವುದು. ಅದರೊಂದಿಗೆ ಪಂಚಮಸಾಲಿ ಸಮಾಜದ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಗಳ ಅಧ್ಯಯನ ನಡೆಸಿ, ಅತಿ ಶೀಘ್ರದಲ್ಲಿ ವರದಿಯನ್ನು ಸರ್ಕಾರಕ್ಕೆ ನೀಡಲಾಗುವುದೆಂದರು. ಈಗಾಗಲೆ ಕೆಲ ಹಿಂದುಳಿದ ಜಾತಿ ಪಟ್ಟಿಯಲ್ಲಿರುವ ಸಮಾಜಗಳು ತಮ್ಮನ್ನು ಬೇರೆ ವರ್ಗಗಳಿಗೆ ಸೇರಿಸುವಂತೆ ಹಾಗೂ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿಲ್ಲದ ಕೆಲ ಜಾತಿಗಳು ತಮ್ಮನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿವೆ, ಹಾಗಾಗಿ ಬೇಡಿಕೆ ಇರುವ ಎಲ್ಲಾ ಜಾತಿಗಳವರ ಮನವಿಗಳನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಅನಾಥಾಶ್ರಮಗಳ ಭೇಟಿ : ಅನಾಥಾಶ್ರಮಗಳಿಗೆ ಭೇಟಿ ನೀಡಿ ಆ ಮಕ್ಕಳ ಮುಂದಿನ ಶೈಕ್ಷಣಿಕ ಹಾಗೂ ಉದ್ಯೋಗದ ಹಿತದೃಷ್ಟಿಯಿಂದ ಆ ಮಕ್ಕಳು ಯಾವ ವರ್ಗಗಳಿಗೆ ಸೇರುತ್ತಾರೆಂಬುದನ್ನು ಪರಿಶೀಲಿಸಿ ವರದಿ ನೀಡಲಾಗುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಹಲವು ಅನಾಥಾಶ್ರಮಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದೆ. ಅಲ್ಲಿ ಅನುಸರಿಸುತ್ತಿರುವ ಮಾದರಿಯಂತೆ ಇಲ್ಲಿನ ಮಕ್ಕಳಿಗೂ ಸೌಲಭ್ಯ ಒದಗಿಸಲು ಶ್ರಮಿಸಲಾಗುವುದೆಂದರು.

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯರುಗಳಾದ, ಕಲ್ಯಾಣ್ ಕುಮಾರ್, ರಾಜಶೇಖರ್, ಅರುಣ್ ಕುಮಾರ್, ಸುವರ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ ಇದ್ದರು. ಸುದ್ದಿಗೋಷ್ಠಿ ಬಳಿಕ ಆಯೋಗವು ಜಿಲ್ಲೆಯ ಪಂಚಮಸಾಲಿ ಸಮಾಜದವರು ವಾಸಿಸುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಕುಲ ಕಸುಬು ಮತ್ತು ಅವರುಗಳ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಅಧ್ಯಯನ ನಡೆಸಿತು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top