ದಾವಣಗೆರೆ: ಗ್ರೀನ್ ಪಟಾಕಿ ಹೆಸರಲ್ಲಿ ಸಾಮಾನ್ಯ ಪಟಾಕಿ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿ ಪಟಾಕಿ ವಶಕ್ಕೆ ಪಡೆದಿದ್ದಾರೆ.
ನಗರದ ಹೈಸ್ಕೂಲ್ ಮೈದಾನದಲ್ಲಿನ ಹಾಕಿರುವ ಪಟಾಕಿ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ಈ ಬಾರಿಯ ದೀಪಾವಳಿಗೆ ಸರ್ಕಾರ ಪಟಾಕಿ ಮಾರಾಟ ನಿಷೇಧಿಸಿದ್ದು, ಗ್ರೀನ್ ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ.
ಈ ಹಿನ್ನೆಲೆ ದಾವಣಗೆರೆಯಲ್ಲಿ ದಾಳಿ ಮಾಡಲಾಗಿದ್ದು, ಸಾಮಾನ್ಯ ಪಟಾಕಿಗಳನ್ನು ಸೀಜ್ ಮಾಡಿ, ಸಾಮಾನ್ಯ ಪಟಾಕಿಗಳನ್ನು ಪಾಲಿಕೆ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಈ ವೇಳೆ ಪರಿಸರ ಮಾಲಿನ್ಯ ಅಧಿಕಾರಿ ಸುನೀಲ್ ಹಾಗೂ ಡಿವೈಎಸ್ಪಿ ನಾಗೇಶ್ ಐತಾಳ್, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.