ದಾವಣಗೆರೆ: ರಾಜ್ಯ ಲೋಕಸೇವಾ ಆಯೋಗದಿಂದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಹುದ್ದೆಗಳ ನೇಮಕಕ್ಕಾಗಿ ಡಿಸೆಂಬರ್ 7 ಮತ್ತು 8 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಡಿ.7 ರಂದು 22 ಕೇಂದ್ರಗಳು ಮತ್ತು ಡಿ.8 ರಂದು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಗಮ ಪರೀಕ್ಷೆ ಹಾಗೂ ಪರೀಕ್ಞಾ ಅವ್ಯವಹಾರವನ್ನು ತಡೆಗಟ್ಟಲು ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ದಿನದಂದು ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಇಂಟರ್‍ನೆಟ್ ಸೆಂಟರ್ ಗಳನ್ನು ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

 
		 
		 
		 
		 
		 
			
 
                                
                             
