ದಾವಣಗೆರೆ: ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಇಳಿಕೆ ಆಗಲಿದೆ ಎಂದು ಜಿಲ್ಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಬರುವ ದಿನಮಾನದಲ್ಲಿ ಪೆಟ್ರೋಲ್, ಡೀಸೆಲ್ ಇಳಿಕೆ ಆಗಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಕೆಲ ಕಡೆ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವ ಯತ್ನ ನಡೆದಿದೆ. ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ತೇವೆ ಎಂದು ಹೇಳಿದರು.



