Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಸೂರು; ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ

ದಾವಣಗೆರೆ: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಸೂರು; ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಸೂರು ಕಲ್ಪಿಸಿ ಎಂದು ಲೋಕಸಭಾ ಸದಸ್ಯ ಜಿ.ಎಂ ಸಿದ್ದೇಶ್ವರ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶವಾಗಿದ್ದು, ಪ್ರತಿ ಹಳ್ಳಿಯಲ್ಲಿರುವ ಅರ್ಹರರಿಗೆ ಈ ಯೋಜನೆ ತಲುಪಬೇಕು. ಜಿಲ್ಲೆಯಲ್ಲಿ 966 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಯಾವುದೇ ಜಾತಿ ಬೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸಬೇಕು ಎಂದರು.

ಅಧಿಕಾರಿಗಳ ನಿರ್ಲಕ್ಷತೆಯಿಂದ ಕಳಪೆ ಕಾಮಗಾರಿಗಳಗುತ್ತವೆ. ಕಳಪೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹೊನ್ನಾಳಿ ಪಟ್ಟಣ ಪಂಚಾಯಿತಿ ವತಿಯಿಂದ ಎರಡು ಕೋಟಿ ವೆಚ್ಚದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ಘಟಕಕ್ಕೆ ಹಗಲು ರಾತ್ರಿ ಸೆಕ್ಯೂರಿಟಿ ಗಾರ್ಡುಗಳನ್ನು ನೇಮಕ ಮಾಡಬೇಕೆಂದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮಾಂತರ ಪ್ರದೇಶಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸಮುದಾಯ ಶೌಚಾಲಯಗಳ ಇದಕ್ಕಲೆ ಸ್ವಚ್ಛತೆ ಹಾಗೂ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಬೇಕು ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಗುಣಮಟ್ಟದ ನಲ್ಲಿ ಹಾಗೂ ಪೈಪುಗಳ ಅಳವಡಿಕೆ ಮತ್ತು ದುರಸ್ತಿಗೊಂಡಿರುವ ನಳ ಸಂಪರ್ಕಗಳನ್ನು ಸರಿಪಡಿಸಬೇಕು. ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತು ಮಾಹಿತಿ ಕೊರತೆ ಇದ್ದು, ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಪ್ರಚಾರ ಮಾಡಿ ನೊಂದಣಿ ಹಾಗೂ ವಿಮಾ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕೈಗೊಳ್ಳಬವೇಕು. ಬಿತ್ತನೆ ಬೀಜ ಗೊಬ್ಬರ ಸಮಸ್ಯೆ ಯಾಗದಂತೆ ನೋಡಿಕೊಳ್ಳಬೇಕು. ಈ ವರ್ಷ ತೊಗರಿ ಬೆಳೆಯನ್ಗನು ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲು ಆದ್ಯತೆ ನೀಡಬೇಕು ಎಂದರು.

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಇ,ಕೆ,ವೈ.ಸಿ ಮಾಡಿಸದೇ ಇರುವ ರೈತರನ್ನು ಗುರುತಿಸಿ ನೊಂದಣಿ ಮಾಡಿಸಬೇಕು. ಎಂದರು. ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಆಹಾರ, ಅಡುಗೆ ಕೊಠಡಿಯನ್ನು ಸ್ವಚ್ಛತೆಯಿಂದ ನೋಡಿಕೊಳ್ಳಬೇಕೆಂದರು.

ಅಂಗನವಾಡಿ ಕೇಂದ್ರಗಳಿಂದ ಮಹಿಳೆ ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಉತ್ತಮ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಜಗಳೂರು ಶಾಸಕರಾದ ಬಿ. ದೇವೇಂದ್ರಪ್ಪ ಮಾತನಾಡಿ ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಹಾಗೂ ಕಡಿಮೆ ತೂಕದ ಮೊಟ್ಟೆಗಳು ಸರಬರಾಜಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಈ ತರದ ದೂರುಗಳಿದ್ದಲ್ಲಿ ಮೇಲಾಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಬೇಕು ಎಂದರು. ಹರಿಹರ ಶಾಸಕರಾದ ಬಿ.ಪಿ ಹರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಕೆ. ಇಟ್ನಾಳ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಡಾ. ಎ. ಚನ್ನಪ್ಪ, ಮುಖ್ಯ ಯೋಜನಾಧಿಕಾರಿ ಮಲ್ಲ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಸೌಮ್ಯಶ್ರೀ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top