ದಾವಣಗೆರೆ: ಪ್ರಧಾನಮಂತ್ರಿ ಅವಾಸ್ 2.0 ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಅವಾಸ್ 2.0 ಯೋಜನೆಯಡಿ ಮನೆ ನಿರ್ಮಾಣ ವಸತಿ ರಹಿತ ಕಚ್ಚಾ ಮನೆ ಹೊಂದಿರುವ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಕ್ಕೆ ಅರ್ಜಿ ಅಹ್ವಾನಿಸಲಾಗಿದೆ.

ಯಾರು ಅರ್ಹರು..?

ಒಂಟಿ ಮಹಿಳೆಯರು, ಅಂಗವಿಕಲರು , ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್‍ಸಿ, ಎಸ್‍ಟಿ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಚತಾ ಕಾರ್ಮಿಕರು, ಪಿಎಂ ಎಸ್‍ಎ ವಿನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು, ವಲಸೆ ಬಂದ ಕುಟುಂಬದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾವ ದಾಖಲೆ ಅಗತ್ಯ..?

ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ನಿಗದಿತ ನಮೂನೆ ಅರ್ಜಿ, ಮೊಬೈಲ್ ಸಂಖ್ಯೆ ಹಾಗೂ ಪ್ಯಾನ್ ಕಾರ್ಡನೊಂದಿಗೆ ಸಲ್ಲಿಸಬಹುದು.

ಅರ್ಜಿಗಳನ್ನು URL:http://pmayurban.gov.in ಜುಲೈ 15 ರೊಳಗಾಗಿ ಸಲ್ಲಿಸಬಹುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ. ಅವಧಿ ಮೀರಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts