ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಇ-ಕೆವೈಸಿ ಮಾಡಿಸಲು ಸೂಚನೆ

ದಾವಣಗೆರೆ: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ  ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts