ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂ-ಎಸ್‌ವೈಎಂ) ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ದಾವಣಗೆರೆ: ಪತಿ ಬಿಟ್ಟು ಪ್ರಿಯಕರ ಜೊತೆ ಪರಾರಿಯಾಗಿ ಪತಿ, ಸೋದರ ಮಾವ ಸಾವಿಗೆ ಕಾರಣಳಾದ ಮಹಿಳೆ ಅರೆಸ್ಟ್
ಯಾರು ಅರ್ಹರು..?
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿಖಾತೆಗೆ ಪಾವತಿಸುತ್ತದೆ. ಫಲಾನುವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000/-ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ. ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ನೊಂದಾಯಿತ ಡೇ-ನಲ್ಮ್ ಯೋಜನೆಯ ಉಪಘಟಕಗಳಾದ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬಸ್ಥರು 8 ರಿಂದ 40 ವಯಸ್ಸಿನ ಒಳಗಿರುವ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 80 ಸಾವಿರ ಮೌಲ್ಯದ ಗಾಂಜಾ, ಬೈಕ್ ವಶ
ಯಾವ ದಾಖಲೆ ಅಗತ್ಯ..?
ಮಾಸಿಕ 15,000/-ಅವರು ಆದಾಯ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ತೆರಿಗೆ, ಬಿಎಸ್‌ಐ, ಪಿ.ಎಸ್, ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಅಂತಹ ಫಲಾನುಭವಿಗಳು ಅಗತ್ಯ ದಾಖಲೆಗಳಾದ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ. ಕೋಡ್ ವಿವರವಿರುವ, ಮತ್ತು ತಮ್ಮ ನಾಮ ನಿರ್ದೇಶಿತ ಸದಸ್ಯರ ನೊಂದಾಯಿತ ಆಧಾರ್ ಲಿಂಕ್ ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್ ಶಾಖೆ, (ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ), ಮಹಾನಗರ ಪಾಲಿಕೆ, ದಾವಣಗೆರೆ ಇಲ್ಲಿಗೆ ಬಂದು ಖುದ್ದಾಗಿ ಅರ್ಜಿ ಸಲ್ಲಿಸಬೇಕು.
ದಾವಣಗೆರೆ: ಐದು ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಮುಷ್ಕರ
ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.



