Connect with us

Dvgsuddi Kannada | online news portal | Kannada news online

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ದಾವಣಗೆರೆ

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ದಾವಣಗೆರೆ; ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ನಡೆದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ವಿವಾಹವಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಮನೆ ಪಕ್ಕದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.ಬಾಲಕಿ ಜೊತೆ ಸ್ನೇಹ ಮಾಡಿದ ಆರೋಪಿ, ಆಕೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ತಲೆಮರಸಿಕೊಂಡಿದ್ದಾನೆ.

ಅಪ್ರಾಪ್ತೆ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದು, ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆ ತಂದೆ ಪ್ರಕರಣ ದಾಖಲಿಸಿದ್ದು, ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿ ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಸರ್ಚ್ ಮಾಡುತ್ತಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top