ಬೆಂಗಳೂರು: ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಬೆಣ್ಣೆನಗರ ದಾವಣಗೆರೆಯಲ್ಲಿ ನಡೆಯಲಿದೆ. ಫೆಬ್ರವರಿ 14 ಪ್ರೇಮಿಗಳ ದಿನದಂದು ದಾವಣಗೆರೆಯಲ್ಲಿ ಪೊಗರು ಸಿನಿಮಾ ಧ್ವನಿ ಸುರುಳಿ ಸಮಾರಂಭ ನೆರವೇರಿಸಲಿದೆ.
ಸಂಜೆ 6 ಗಂಟೆಗೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಪೊಗರು ಚಲನಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಭಾಗವಹಿಸಲಿದ್ದಾರೆ. ನಂದಕಿಶೋರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಈ ಚಿತ್ರ ತೆರೆ ಮೇಲೆ ಬರಲಿದೆ.