ದಾವಣಗೆರೆ : ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈಗಾಗಲೇ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಡಿ.17 ರಂದು ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ನಡೆಸಲಾಗುವುದು.
ಖಾಲಿ ಇರುವ ಹುದ್ದೆಗಳಿಗೆ 1:5 ಅನುಪಾತದಲ್ಲಿ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಈಗಾಗಲೇ ಇಲಾಖೆಯಿಂದ ಮಾಹಿತಿಯನ್ನು ನೀಡಿ, ಇಲಾಖಾ ವೆಬ್‍ಸೈಟ್‍ನಲ್ಲಿ ಕರಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ತಿಳಿಸಲಾಗಿರುತ್ತದೆ. ಅದರನ್ವಯ ಸಂಬಂಧಿಸಿದ ಅಭ್ಯರ್ಥಿಗಳು ಡಿ.17 ರಂದು ಬೆಳಿಗ್ಗೆ 7 ಗಂಟೆಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣ, ಹದಡಿ ರಸ್ತೆ, ದಾವಣಗೆರೆ ಇಲ್ಲಿ ನಡೆಸಲಾಗುವ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಪೊಲೀಸ್ ಅಧೀಕ್ಷಕ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



