ದಾವಣಗೆರೆ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
ರೌಡಿ ಶೀಟರ್ ಆಂಜನೇಯ ಅಲಿಯಾಸ್ ಆಂಜನಿ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಮಧು (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪ ಇವರ ಮೇಲಿತ್ತು. ಇಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಮಧು ಎಂಬಾತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.



