ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜಿ.ಪಂ ಕಚೇರಿ ಸಮೀಪ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಬೆಂಗಳೂರು ಕಡೆ ಸಾಗಾಟ ಮಾಡುತ್ತಿದ್ದಾಗ ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 10 ಲಕ್ಷ ಬೆಲೆಯ ಅಶೋಕ್ ಲೈಲ್ಯಾಂಡ್ ಲಾರಿ, 2.555,300 ರೂಪಾಯಿ ಮೌಲ್ಯದ 170 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ರಾಣೆಬೇನ್ನೂರು ಮೂಲದ ಚಾಲಕ ಖಾದರ್ ಸಾಬ್ (24 ) ವಶಕ್ಕೆ ಪಡೆಯಲಾಗಿದ್ದು, ಅಕ್ಕಿ ಮತ್ತು ಲಾರಿ ಮಾಲೀಕನ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಎಸ್ ಪಿ ನರಸಿಂಹ ತಾಮ್ರಧ್ವಜ ಮಾರ್ಗದರ್ಶನದಲ್ಲಿ ಕೆಟಿಜೆನಗರ ವೃತ್ತ ನಿರೀಕ್ಷಕ ಶಶಿಧರ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಪಿಎಸ್ ಐಗಳಾದ ರೇಣುಕಾ, ಜಯಪ್ಪನಾಯ್ಕ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಜಿಲ್ಲಾ ಪೊಲೀಸರ ಕಾರ್ಯಾಚರಣೆಗೆ ಎಸ್ ಪಿ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



