ದಾವಣಗೆರೆ: ನಗರದಲ್ಲಿ 40 ವಿವಿಧ ಪೊಲೀಸ್ ಪರೀಕ್ಷಾ ಕೇಂದ್ರಗಳಲ್ಲಿ ಎಪಿಸಿ (CAR/DAR) ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆ ನಡೆದಿದ್ದು, ಒಟ್ಟು 15000 ಪರೀಕ್ಷಾ ಅಭ್ಯರ್ಥಿಗಳಲ್ಲಿ 9689 ಅಭ್ಯರ್ಥಿಗಳು ಹಾಜರಾಗಿದ್ದು, 5311 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.
ಎಸ್ಪಿ ಉಮಾ ಪ್ರಶಾಂತ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ ಸಂತೋಷ್ ಹಾಗೂ ಮಂಜುನಾಥ ಜಿ ಸಹ ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ನೇಮಕಾತಿ ಪರೀಕ್ಷಾ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.



