ದಾವಣಗೆರೆ : ಜಿಲ್ಲಾ ಪೊಲೀಸ್ , ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆ, ಪರ್ವತ ಲೈಪ್ ಕೇರ್, ಆಚಾರ್ ಲ್ಯಾಬ್ಸ್ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಸ್ವಯಂ ಪ್ರೇರಿತ ರಕ್ತ ಕೇಂದ್ರ ಸಂಯುಕ್ತಾಶ್ರಯದಲ್ಲಿ ನಗರದ ಪೊಲೀಸ್ ವಸತಿ ಗೃಹಗಳ ಆವರಣದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು, ಎಸ್ಪಿ ಉಮಾ ಪ್ರಶಾಂತ್ ಶಿಬಿರ ಉದ್ಘಾಟಿಸಿದರು.
ನಂತರ ಮಾತನಾಡುದ ಅವರು, ಪೊಲೀಸರು ದಿನದ 24 ಗಂಟೆಯೂ ಕರ್ತವ್ಯ ನಿರತರಾಗಿರುವುದರಿಂದ ಒತ್ತಡಕ್ಕೆ ಒಳಗಾಗಿ, ಅನೇಕ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಆದ್ದರಿಂದ ಪೊಲೀಸರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ಆರೋಗ್ಯ ತಪಾಸಣೆಗೆ ಮಾಡಿಸಬೇಕು. ಪೊಲೀಸರ ಆರೋಗ್ಯದ ಜೊತೆಗೆ ಅವರ ಕುಟುಂಬದವರ ಆರೋಗ್ಯವೂ ಅಷ್ಟೇ ಮುಖ್ಯ. ಕುಟುಂಬದ ಆರೋಗ್ಯ ಚೆನ್ನಾಗಿದ್ದರೆ ಪೊಲೀಸರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಪೊಲೀಸರು ಆರೋಗ್ಯವಾಗಿದ್ದರೆ ಕರ್ತವ್ಯ ನಿರ್ವಹಿಸಲು ಸಾಧ್ಯ. ಅದರಂತೆ ಪ್ರತಿಯೊಬ್ಬರಿಗೂ ಆರೋಗ್ಯ ತುಂಬಾ ಮುಖ್ಯ. ಎಲ್ಲರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಇಲಾಖೆ ವತಿಯಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಿಡ್ನಿ ತಜ್ಞ ಡಾ. ಮೋಹನ್ ಆರ್ ಮಾತನಾಡಿ, ಕಿಡ್ನಿಗೆ ಸಂಬಂಧಿಸಿದ ಮಾಹಿತಿ, ಕಿಡ್ನಿಯನ್ನು ಆರೋಗ್ಯಯುವಾಗಿ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಮಾಹಿತಿ ನೀಡಿದರು. ಶಿಬಿರದಲ್ಲಿ ರಕ್ತ ಪರೀಕ್ಷೆ, ಕಣ್ಣಿ ತಪಾಸಣೆ, ಬಿಪಿ ಶುಗರ್, ಕಿಡ್ನಿ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಜೊತೆಯಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ದಾವಣಗೆರೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ಬಿ.ಎಸ್ , ಡಿಎಆರ್ ಡಿವೈಎಸ್ಪಿ ಪಿ ಬಿ ಪ್ರಕಾಶ್, ಆರ್ ಪಿ ಐ ಸೋಮಶೇಖರ್ ಹಾಗೂ ಡಾ. ಮೋಹನ್ ಆರ್ ರ
ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.



