ದಾವಣಗೆರೆ: ದಾವಣಗೆರೆ ಜಿಲ್ಲೆಯ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ ಸಂಬಂಧ ದ್ವಿತೀಯ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಯಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿದೆ. ಹಾಗೂ ಕಚೇರಿಯ ವೆಬ್‍ಸೈಟ್ ವಿಳಾಸ www.dvgpolice.in ನಲ್ಲಿ ಸಹ ವೀಕ್ಷಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.