ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ (police public school Kondajji) ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ ಹೊಂದಿರಬೇಕು. ಕನಿಷ್ಠ 3 ವರ್ಷದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ರೊಳಗಾಗಿ ಇ-ಮೇಲ್ ppschooldvg@gmail.com ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480803206, 9743936234 ನ್ನು ಸಂಪರ್ಕಿಸಲು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.



