ದಾವಣಗೆರೆ: 2026ರ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನೈತಿಕ ಪೊಲೀಸ್ ಗಿರಿ ಅಥವಾ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾಗಿ ಹೊಸ ವರ್ಷವನ್ನು ಸ್ವಾಗತಿಸಲು ಸಾರ್ವಜನಿಕರು ಸಹಕರಿಸಬೇಕು.
– ಎಸ್ಪಿ ಉಮಾ ಪ್ರಶಾಂತ್
ಪೊಲೀಸ್ ಇಲಾಖೆ ಕೊಟ್ಟ ಸೂಚನೆ ಏನು..?
- ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಕರು ನಿಗದಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು.
- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ವೀಲಿಂಗ್ ಹಾಗೂ ಟ್ರಿಪಲ್ ರೈಡಿಂಗ್ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು
- ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ, ಮಹಿಳೆಯರಿಗೆ ಚುಡಾಯಿಸುವುದು ಅಥವಾ ದಾಂದಲೆ ನಡೆಸಿದರೆ ಜೈಲು ಪಾಲಾಗಬೇಕಾಗುತ್ತದೆ
- ಸುಪ್ರೀಂ ಕೋರ್ಟ್ ಆದೇಶದಂತೆ ಧ್ವನಿವರ್ಧಕ ಬಳಸಬೇಕು. ಡಿಜೆ ಹಾಗೂ ಕರ್ಕಶ ಶಬ್ದ ಮಾಡುವ ಸೌಂಡ್ ಸಿಸ್ಟಂ ಬಳಕೆಯನ್ನು ನಿಷೇಧಿಸಲಾಗಿದೆ.
- ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ
- ಅಗ್ನಿ ಅವಘಡ ಆಗದಂತೆ ಎಚ್ಚರ ವಹಿಸಬೇಕು ಎಂದು ಇಲಾಖೆ ತಿಳಿಸಿದೆ
- ಕೋಮು ಪ್ರಚೋದಕ ಪೋಸ್ಟ್ ಅಥವಾ ಸುಳ್ಳು ಸುದ್ದಿ ಹರಡುವವರ ಮೇಲೆ ಸೈಬರ್ ಪೊಲೀಸರು ಕಣ್ಣಿಟ್ಟಿದೆ
- ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕ್ಯಾಮೆರಾ ಮೂಲಕ ಪೊಲೀಸರು ಹದ್ದಿನ ಕಣ್ಣು
- ಜಿಲ್ಲೆಯಾದ್ಯಂತ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಪತ್ತೆಗೆ ವಿಶೇಷ ತಪಾಸಣೆ
- ಜಿಲ್ಲೆಯ ತಾಲೂಕು ಕೇಂದ್ರಗಳಲ್ಲೂ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕೆಎಸ್ಆರ್ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ
- ಯಾವುದೇ ತುರ್ತು ಸಂದರ್ಭ ಅಥವಾ ಅಹಿತಕರ ಘಟನೆಗಳು ಕಂಡುಬಂದರೆ ತಕ್ಷಣ 112 ಸಹಾಯವಾಣಿಗೆ ಕರೆ ಮಾಡುವಂತೆ ಇಲಾಖೆ ತಿಳಿಸಿದೆ
ಬೇಸಿಗೆ ಹಂಗಾಮಿನ ಬೆಳೆಗೆ ನೀರು: ಜ.2ರಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ



