ದಾವಣಗೆರೆ:40 ಪರ್ಸಂಟೈಸ್ ಆರೋಪ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಲೋಕಾಯುಕ್ತ ಯಾಕೆ ಮುಚ್ಚಿದ್ರೂ…?ದೇಶದಲ್ಲಿ ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಪಿಎಸ್‌ಐ, ಶಿಕ್ಷಕರ ನೇಮಕಾತಿ ಸೇರಿದಂತೆ ಹಲವು ರೀತಿಯ ಹಗರಣಗಳು ಆಗಿವೆ. ರಾಜ್ಯದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡುತ್ತಿದೆ. ಈ ಆಡಳಿತ ಸಹಿಸದ ಕಾಂಗ್ರೆಸ್ ಆಧಾರರಹಿತ ಆರೋಪ ಮಾಡುತ್ತಿದೆ.
ದೇಶಾದ್ಯಂತ ಬಿಜೆಪಿ ಅಲೆ ಇದೆ. ಇತ್ತೀಚೆಗೆ ನಡೆದ ಗೋವಾ, ಉತ್ತರಾಖಂಡ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಹಿಮಾಚಲ ಪ್ರದೇಶ, ಗುಜರಾತ್ ಹಾಗೂ ಕರ್ನಾಟಕದಲ್ಲಿ ಸಂಪೂರ್ಣ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.



