ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರದಿಂದ ಎರಡನೇ ಕ್ಷೇತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬುದು ರಾಜ್ಯ ರಾಜಕೀಯದಲ್ಲಿ ಚರ್ಚೆ ಶುರುವಾಗಿತ್ತು. ಇದಕ್ಕೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದು, ನಾನು ದಾವಣಗೆರೆ ಉತ್ತರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಹೇಳಿದ್ದೇನೆ. ನನ್ನ ತಲೆಯಲ್ಲಿ ದಾವಣಗೆರೆ ಉತ್ತರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ದಾವಣಗೆರೆ ಉತ್ತರದಿಂದ ನಾನು ಸ್ಪರ್ಧೆ ಮಾಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ.



