ದಾವಣಗೆರೆ: ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಲೂ ನಮ್ಮ ನಾಯಕ. ಉತ್ತರ ಕರ್ನಾಟಕ ಭಾಗದ ದೊಡ್ಡ ನಾಯಕ, ಹಿಂದೂಹುಲಿಯನ್ನು ಬಿಜೆಪಿಯಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ಅವರು ಹೊಸ ಪಕ್ಷ ಕಟ್ಟುವುದಿಲ್ಲ. ಒಂದು ವೇಳೆ ಕಟ್ಟಿದರೆ ನಾವು ಯಾರೂ ಅವರೊಂದಿಗೆ ಹೋಗುವುದಿಲ್ಲ ಎಂದು ಬಿಜೆಪಿ ರೆಬೆಲ್ ಟೀಂ ನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಹೇಳಿದರು.
ರಾಜ್ಯದಲ್ಲಿ ಏ.12 ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಎಲ್ಲೂ ಹೇಳಿಲ್ಲ. ಅವರ ಉಚ್ಛಾಟನೆ ನಂತರ ಬೆಂಗಳೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೂ ಈ ಬಗ್ಗೆ ಯಾವುದೇ ಪ್ರಸ್ತಾಪಗಳು ನಡೆದಿಲ್ಲ. ಹೊಸ ಪಕ್ಷ ಕಟ್ಟುವುದು ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿಸಿದರು.
ದಾವಣಗೆರೆ: ಕೊಂಡಜ್ಜಿ ಕೆರೆ ಪ್ರವಾಸಿ ತಾಣವಾಗಿಸಲು ಕ್ರಮ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಉತ್ತರ ಕರ್ನಾಟಕ ಭಾಗದಲ್ಲಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಿಸಲು, ಯತ್ನಾಳ್ ಅನಿವಾರ್ಯ. ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಸಂಬಂಧ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆಗಳು ನಡೆಸುತ್ತೇವೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬದಲಾವಣೆ ಬಗ್ಗೆ ಕಾದು ನೋಡಿ ಎಂದರು.
ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಹೊಸ ಪಕ್ಷ ಕಟ್ಟಲು ನಾವು ಬಿಡುವುದಿಲ್ಲ. ಒಂದು ವೇಳೆ ಕಟ್ಟಿದರೆ ನಾವು ಅವರೊಂದಿಗೆ
ಹೋಗದೇ ಬಿಜೆಪಿಯಲ್ಲಿಯೇ ಇರುತ್ತೇವೆ. ಶೀಘ್ರವೇ ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳು ಬಗೆಹರಿಯಲಿವೆ. ಮುಂದಿನ 15 ದಿನಗಳಲ್ಲಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಗಾದಿಗೆ ಹೊಸಬರ ಆಯ್ಕೆ ನಡೆಯಲಿದ್ದು, ನಂತರ ಎಲ್ಲ ರಾಜ್ಯಗಳ ಅಧ್ಯಕ್ಷರು ಆಯ್ಕೆಯಾಗಲಿದ್ದಾರೆ. ಆಗ ಸರಿ ಹೋಗಲಿದೆ ಎಂದು ಹೇಳಿದರು.
ಪಕ್ಷದ ಶಿಸ್ತು ಸಮಿತಿಯಿಂದ ನನಗೂ ನೋಟಿಸ್ ಬಂದಿತ್ತು. ಈಗಾಗಲೇ ಅದಕ್ಕೆ ಉತ್ತರಿಸಿದ್ದೇನೆ. ಲೋಕಸಭಾ ಚುನಾವಣೆ
ವೇಳೆ ಒಳ ಒಪ್ಪಂದ ಕುರಿತ ನನ್ನ ಹೇಳಿಕೆ ಉತ್ತರ ನೀಡಿದ್ದೇನೆ ಎಂದರು.
ದಾವಣಗೆರೆ ವಿಶ್ವ ವಿದ್ಯಾನಿಲಯದಿಂದ ನಮ್ಮ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ರಿಗೆ ಕಾಂಗ್ರೆಸ್
ಸರ್ಕಾರದ ಅವಧಿಯಲ್ಲಿ ಪಕ್ಷಾತೀತವಾಗಿ ಗೌರವ ಡಾಕ್ಟರೇಟ್ ನೀಡಿದ್ದಕ್ಕೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು.
ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್,ದೇವರನಿ ಶಿವಕುಮಾರ್. ರಾಜನಹಳ್ಳಿ ಶಿವಕುಮಾರ್, ಪಕ್ಷದ ಮುಖಂಡರಾದ ಬಿ.ಎಸ್. ಜಗದೀಶ್, ಶ್ರೀನಿವಾಸ್ ದಾಸಕರಿಯಪ್ಪ, ಅಣಬೇರು ಜೀವನಮೂರ್ತಿ, ವೀರೇಶ್
ಹನಗವಾಡಿ ಇತರರು ಇದ್ದರು.



