ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರಾದ 27ನೇ ವಾರ್ಡ್ ನ ಜೆ.ಎನ್ ಶ್ರೀನಿವಾಸ್ ಹಾಗೂ 38 ನೇ ವಾರ್ಡ್ ನ ಶ್ವೇತಾ ದಂಪತಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.
ದಾವಣಗೆರೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಗರದ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ “ಕಾರ್ಯಕರ್ತರ ಸಮಾವೇಶ”ದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಜೆ.ಎನ್.ಶ್ರೀನಿವಾಸ್ ಮತ್ತು ಶ್ವೇತಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಭೈರತಿ ಬಸವರಾಜ್, ಶಾಸಕರಾದ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿ ಕುಮಾರ್, ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿನ್ನೆ (ಏ.19) ಕಾಂಗ್ರೆಸ್ ನ ಇಬ್ಬರು ಮೇಯರ್ ಜಯಮ್ಮ ಗೋಪಿನಾಯ್ಕ ಅವರನ್ನು ಭೇಟಿ ಮಾಡಿ ಪಾಲಿಕೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಬಿಜೆಪಿಯ ಅಜಯ್ ಕುಮಾರ್ ಮೇಯರ್ ಆಗುವ ಸಂದರ್ಭದಲ್ಲಿ ಬಿಜೆಪಿಗೆ ಪರೋಕ್ಷವಾಗಿ ಬೆಂಬಲಿಸುವ ಮೂಲಕ ಸಹಕಾರ ನೀಡಿದ್ದರು. ನಂತರ ಕಾಂಗ್ರೆಸ್ ನಲ್ಲಿಯೇ ಉಳಿದಿದ್ದರು. ಇದೀಗ ಬಿಜೆಪಿ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ.