ದಾವಣಗೆರೆ: ಪಕ್ಷಕ್ಕೆ ಮುಜುಗರಕ್ಕೆ ಆಗುವಂತೆ ನಾನು ನಡೆದುಕೊಳ್ಳುವುದಿಲ್ಲ. ಪಕ್ಷದ ಶೋಕಾಸ್ ನೋಟಿಸ್ ಗೆ 72 ಗಂಟೆಯಲ್ಲಿ ಉತ್ತರ ನೀಡುತ್ತೇನೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ಅಪಘಾತ; ಬೈಕ್ ಸವಾರ- ಪಾದಚಾರಿ ಇಬ್ಬರೂ ಸಾವು
ಸುದ್ದಿಗಾರರೊಂದಿಗೆ ಮಾತನಾಡಿ,ಕಾರ್ಯಕರ್ತರಿಗೆ ಒಳ್ಳೆ ದಿನಗಳು ಬಂದಿವೆ. ಶೋಕಾಸ್ ನೋಟಿಸ್ ನೀಡಿರುವುದರಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೈವಾಡ ಇಲ್ಲ. ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೆ ನ್ಯಾಯ ಸಿಗಬೇಕಿದೆ. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಲು ಶೋಕಾಸ್ ನೋಟಿಸ್ ನೀಡಲಾಗಿದೆ. ಈ ಬಗ್ಗೆ 72 ಗಂಟೆಯಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ರಾಜಕಾರಣ ಕೊನೆಯಾಗಬೇಕು. ನಮ್ಮ ಪಕ್ಷದ ಕೆಲ ನಾಯಕರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಚುನಾವಣೆಗೂ ಮುನ್ನವೇ ಇದನ್ನು ಪಕ್ಷದ ಗಮನಕ್ಕೆ ತರಲಾಗಿತ್ತು. ಮತ್ತೊಮ್ಮೆ ನೋಟಿಸ್ ಗೆ ಉತ್ತರಿಸುವ ಮೂಲಕ ವರಿಷ್ಠರಿಗೆ ಮನವರಿಕೆ ಮಾಡಿಕೊಲಾಗುವುದು. ಇನ್ನೀ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.



