ದಾವಣಗೆರೆ: ಕೇವಲ ಒಬ್ಬ ಸಚಿವರು, ಶಾಸಕರು ಮಾತ್ರ ನಾಯಕರಲ್ಲ, ಗ್ರಾಮ ಪಂಚಾಯಿತಿ ಸದಸ್ಯ, ಸಮಾಜದ ಮುಖಂಡರು ನಾಯಕರೇ…ನಾನು ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಓಡಾಡುತ್ತಿದ್ದೇನೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಿ.ಬಿ.ವಿನಯ್ ಕುಮಾರ್ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವುದೆ. ಒಂದು ವೇಳೆ ಟಿಕೆಟ್ ಸಿಗದಿದ್ರೆ ಯಾರಿಗೆ ನೀಡಿದರೂ ಗೆಲುವಿಗೆ ಶ್ರಮಿಸುತ್ತೇನೆ. ಎರಡು ತಿಂಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಟಿಕೆಟ್ ನೀಡುವ ವಿಚಾರವಾಗಿ ಸಭೆ ನಡೆದಿತ್ತು. ಆಗ ಜಿಲ್ಲೆಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಈ ವೇಳೆ ಹಾಜರಿದ್ದರು. ದಾವಣಗೆರೆ ಲೋಕಸಭೆಯಲ್ಲಿ ಈ ಬಾರಿ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಬಂದಾಗ ಮೊದಲು ಹೆಸರು ಪ್ರಸ್ತಾಪ ಆಗಿದ್ದು ನನ್ನ ಹೆಸರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಓಡಾಡುತ್ತಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನನಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸ ಇದೆ. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬೇರೆ ಪಕ್ಷಕ್ಕೆ ಹೋಗುವ ಆಲೋಚನೆ ಇಲ್ಲ. ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ. ನಾನು ಜಿಲ್ಲಾಧ್ಯಕ್ಷ ಹೆಚ್ ಬಿ ಮಂಜಪ್ಪ ವಿರೋಧಿ ಅಲ್ಲ. ಅವರ ಬಳಿಯೂ ಮಾತನಾಡಿದ್ದೇನೆ. ಬೆಂಬಲಿಸುವುದಾಗಿ ಹೇಳಿದ್ದಾರೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರಿಗೆ ಫೋನ್ ಮಾಡಿದ್ದೆ. ಟಿಕೆಟ್ ವಿಚಾರ ಸಂಬಂಧ ಮಾತನಾಡಿದ್ದೆ. ಆಗ ಅವರು ಕ್ಷೇತ್ರದಲ್ಲಿ ಕೆಲಸ ಮಾಡಿ, ಓಡಾಡಿ ಎಂದಿದ್ದರು. ಆ ನಿಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ಸಂಚರಿಸುತ್ತಿದ್ದೇನೆ. ಮುಂದಿನ ವಾರದೊಳಗೆ ಸಚಿವ ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಟಿಕೆಟ್ ಆಕಾಂಕ್ಷಿಯಾಗಿರುವ ಕಾರಣ ಮಂಜಪ್ಪ ಯಾರ್ಯಾರೋ ಬಂದು ಆಕಾಂಕ್ಷಿ ಎಂದು ಓಡಾಡುತ್ತಿದ್ದಾರೆ ಎಂಬ ಹೇಳಿಕೆ ನೀಡಿರುವುದು ಗಮನಿಸಿದ್ದೇನೆ. ನಾನೇನೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಮಂಜಪ್ಪರ ಭೇಟಿಯಾಗಿ ಮಾತನಾಡಿದ್ದೇನೆ. ನಾನು ಯಾರ ವಿರುದ್ಧವೂ ಹೋರಾಡುತ್ತಿಲ್ಲ. ನಾನು ಟಿಕೆಟ್ ನೀಡಿ ಎಂದು ಕೇಳುತ್ತಿದ್ದೇನೆ. ಒಬ್ಬರೇ ಆಕಾಂಕ್ಷಿ ಇರಬೇಕೆಂದೇನಿಲ್ಲ. ಎಲ್ಲರಿಗೂ ಓಪನ್ ಆಗಿರುತ್ತದೆ. ಎಸ್. ಎಸ್. ಮಲ್ಲಿಕಾರ್ಜುನ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ. ಅವರಿಗೆ ಟಿಕೆಟ್ ಕೊಟ್ಟರೆ ಸಂತೋಷ. ಇಲ್ಲದಿದ್ದರೆ ನಾನು ಸಹ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ವಿನಯ್ ಕುಮಾರ್ ಹೇಳಿದರು.
ದಾವಣಗೆರೆ: ಭೀಕರ ದುರಂತ; ಬಂಟಿಂಗ್ಸ್ ಕಟ್ಟುವಾಗ ಕ್ರೇನ್ ಗೆ ಸಿಲುಕಿ ಯುವಕ ಸಾವು; ನಾಳೆಯ ಹಿಂದೂ ಮಹಾ ಗಣಪತಿ ಬೈಕ್ ರ‍್ಯಾಲಿ ರದ್ದು…!
ದಾವಣಗೆರೆ: ಅ.14 ರಂದು ಗಣೇಶ ಮೂರ್ತಿ ವಿಸರ್ಜನೆ; ತಾತ್ಕಾಲಿಕವಾಗಿ ಬಸ್ ನಿಲುಗಡೆ ಸ್ಥಳ, ಮಾರ್ಗ ಬದಲಾವಣೆ