ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆಗೆ ನಮ್ಮ ವರಿಷ್ಠರು ರಾಜ್ಯದಲ್ಲಿ ಎಲ್ಲಿಯಾದರೂ ಸ್ಪರ್ಧೆ ಮಾಡಿ ಎಂದರೂ ಸಿದ್ಧನಿದ್ದೇನೆ. ನಮ್ಮ ನಾಯಕರು ಗ್ರಾಮ ಪಂಚಾಯತಿಯಲ್ಲಿ ಸ್ಪರ್ಧೆ ಮಾಡಿ ಎಂದರೂ ಅದಕ್ಕೂ ಸಿದ್ಧ ಎಂದು ಸಂಸದ ಜಿಎಂ ಸಿದ್ದೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಶಾಸಕ ಎಸ್. ಎ. ರವೀಂದ್ರನಾಥ್ ಅವರಿಗೆ ಟಿಕೆಟ್ ಕೊಡಬೇಕು ಎಂದು ವರಿಷ್ಠರನ್ನು ಒತ್ತಾಯಿಸಿದ್ದೇವೆ. ಒಂದು ವೇಳೆ ರವೀಂದ್ರನಾಥ್ ಅಭ್ಯರ್ಥಿ ಆಗದಿದ್ದರೆ ಒಳ್ಳೆ ಅಭ್ಯರ್ಥಿ ನಿಲ್ಲಿಸುತ್ತೇವೆ. ಪಕ್ಷದ ವರಿಷ್ಠರು ಹೇಳಿದರೆ ರಾಜ್ಯ ರಾಜಕಾರಣ ಅಲ್ಲ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದರು.
ನಾನು ಜಿಲ್ಲೆಯ ಚುನಾವಣೆ ಸಾರಥ್ಯ ವಹಿಸುವುದಿಲ್ಲ. ಆದರೆ, ನಮ್ಮ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಿಸುತ್ತೇನೆ. ನಾನು ರಾಜ್ಯ ಕಾರಣಕ್ಕೆ ಬರುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು, ಪಕ್ಷ ಹೇಳಿದರೆ ನಾನು ಮನೆಗೆ ಹೋಗಿ ಅಂದರೆ ಹೋಗ್ಬೇಕು ಎಂದರು.



