ದಾವಣಗೆರೆ: ನಮ್ಮ ನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶ ಇದೆ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಇನ್ನೊಬ್ಬರಿಗೆ ನೋವು ಕೊಟ್ಟು ಸಿಎಂ ಆಗುವುದಿಲ್ಲ. ಈಗ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಜೊತೆ ಇದ್ದೇವೆ ಎಂದರು.
ಇದು ಮುಖ್ಯಮಂತ್ರಿ ಬದಲಾವಣೆ ಚರ್ಚೆ ಸೂಕ್ತ ಕಾಲವಲ್ಲ. ಬೇರೆಯವರಿಗೆ ನೋವು ಕೊಟ್ಟು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಬಯಸುವುದಿಲ್ಲ. ಡಿ.ಕೆ. ಶಿವಕುಮಾರ್ ಸಿಎಂ ಆಗುವವರೆಗೂ ಇದೇ ರೀತಿ ಹೇಳುತ್ತೇವೆ ಎಂದರು.