ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರೊಬ್ಬರಿಂದ ಏನು ಮಾಡಲು ಆಗುವುದಿಲ್ಲ. ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ನಾನು ಮತ್ತೊಮ್ಮೆ ಸ್ಪರ್ಧಿಸುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿದರು.
ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಸ್ಥಾನ ನೀಡಿರುವುದಕ್ಕೆ ಪ್ರತಿಕ್ರಿಯಿಸಿ ಈ ರೀತಿ ಹೇಳಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಈಗ ತಪ್ಪಿನ ಅರಿವಾಗಿದೆ. ಸಿದ್ದರಾಮಯ್ಯ ಪಶ್ಚಾತ್ತಾಪ ಪಟ್ಟಿದ್ದಾರೆ, ಅಲ್ಲಿಗೆ ಮುಗಿಯಿತು ಎಂದರು.
ಮತ್ತೊಮ್ಮೆ ಧರ್ಮ ಒಡೆಯುವ ಪ್ರಯತ್ನಕ್ಕೆ ಹೋಗುವುದಿಲ್ಲ ಸಿದ್ದರಾಮಯ್ಯ ಹೆಳಿದ್ದಾರೆ. ಅವರಿಗೆ ಒಳ್ಳೆಯ ಬುದ್ಧಿ ಬಂದಿದೆ. ಈ ವಿಚಾರದಲ್ಲಿ ಅವರ ಪಾತ್ರವೇನೂ ಇಲ್ಲ. ಬೇರೆಯವರ ಒತ್ತಡವಿತ್ತು. ಆರೋಪ ಮಾತ್ರ ಅವರ ಮೇಲೆ ಬಂದಿತ್ತು ಎಂದು ತಿಳಿಸಿದರು.



