ದಾವಣಗೆರೆ: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದೆ. ಇದೊಂದು ಸುಳ್ಳು ಭರವಸೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಉಚಿತ ವಿದ್ಯುತ್ ಭರವಸೆ ನೀಡಿದ ರಾಜಸ್ಥಾನ ಸೇರಿ ವಿವಿಧ ರಾಜ್ಯಗಳಲ್ಲಿ ನೀಡಿದ ಆಶ್ವಾಸನೆ ಏನಾಯಿತು? ಕಾಂಗ್ರೆಸ್ ಎಂದರೆ ಬರಿ ಸುಳ್ಳು. ಕಾಂಗ್ರೆಸ್ ನಲ್ಲಿ ಈಗಿರುವುದು ಬರೀ ನಕಲಿ ಗಾಂಧಿಗಳು ಎಂದರು.
ಫೆಬ್ರವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರದ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದರು.