ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.
ಈ ಬಗ್ಗೆ ಸಂಸದ ಜಿ.ಎಂ.ಸಿದ್ದೇಶ್ವರ ಮಾಹಿತಿ ನೀಡಿದ್ದು, ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು. ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ನಾಯಕರು ಭಾಗಿಯಾಗುವರು. ಮೋದಿ ಆಗಮನದಿಂದ ಕಾರ್ಯಕರ್ತರಲ್ಲಿ ನವ ಚೈತನ್ಯ ಮೂಡಲಿದೆ. ಇದು ಗಾಯತ್ರಿ ಸಿದ್ದೇಶ್ವರ ಹೆಚ್ಚಿನ ಅಂತರ ಗೆಲುವಿಗೆ ನೆರವಾಗಲಿದೆ ಎಂದರು.



