ದಾವಣಗೆರೆ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆ ಆಗಲಿದೆ. ಕಾಂಗ್ರೆಸ್ ಗೆ ಜನರ ಬಳಿ ಹೋಗಲು ಅವರಿಗೆ ಮುಖ ಇಲ್ಲ, ಶಾಸಕರಿಗೆ ಅನುದಾನ ಇಲ್ಲ, ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಸರ್ಕಾರ ಇದಿಯೋ ಇಲ್ಲ ಎನ್ನುವಷ್ಟರ ಮಟ್ಟಿಗೆ ಆಡಳಿತ ಹದಗೆಟ್ಟಿದ್ದು, ಆರ್ಥಿಕತೆ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವರಣಗೆರೆಯಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಂಸದ ಗೋವಿಂದ ಕಾರಜೊಳ ಅವರ ಹೇಳಿಕೆಯಲ್ಲಿ ಸತ್ಯಾಂಶ ವಿರುತ್ತದೆ. ಅವರು ಬಿಜೆಪಿಯ ಹಿರಿಯರು. ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿದ್ದಾರೆ.
ಗ್ಯಾರೆಂಟಿ ಹೆಸರಲ್ಲಿ ಓಟು ಪಡೆಯಲು ಬಡವರ, ಸಾಮಾನ್ಯರ ಮೇಲೆ ಹೊರೆಯ ಬರೆ ಎಳೆ ಎಳೆದಿದ್ದು, ಪೆಟ್ರೋಲ್ ಡಿಸೇಲ್ ಸೇರಿದಂತೆ ಎಲ್ಲ ದರ ಹೆಚ್ಚಳ ಮಾಡಿ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಆರ್ಥಿಕತೆ ದಿವಾಳಿ ಮಾಡಿದೆ. ಅಭಿವೃದ್ಧಿಯಲ್ಲಿ ಹತ್ತು ವರ್ಷ ಹಿಂದಕ್ಕೆ ತಳ್ಳಲಾಗಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಗಾಗಿ ಮೋಟರ್ ಟ್ಯಾಕ್ಸ್, ಮದ್ಯದ ದರ ಹೆಚ್ಚು ಮಾಡಿ, ಸ್ಟ್ಯಾಂಪ್ ತೆರಿಗೆ ಹೆಚ್ಚಳ ಮಾಡಿದ್ದರು. ಈಗ ಪೆಟ್ರೋಲ್ ಡಿಸೇಲ್ ದರ ಹೆಚ್ಚು ಮಾಡಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ರಾಜ್ಯವನ್ನು ಅಳುವ ನೈತಿಕತೆ ಇಲ್ಲ. ಒಂದು ವರ್ಷದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ಅಭಿವೃದ್ದಿಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಶಾಪ ಹಾಕುತ್ತಿದ್ದಾರೆ.
ಲೋಕಸಭೆಯಲ್ಲಿ ಹಿನ್ನಡೆಯಿಂದ ಬೆಂಗಳೂರು ಸುತ್ತಮುತ್ತ ಜಮೀನುಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಪಿಯಾಕ್ಕೆ ರಾಜ್ಯ ಸರ್ಕಾರದ ಪಿತ್ರಾರ್ಜಿತ ಆಸ್ತಿಯನ್ನು ಮಾರಾಟ ಮಾಡಿ ಡೀಲ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಬೆಲೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.