ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಈಗ ಸಿಎಂ ಬದಲಾವಣೆ ಕೂಗಿ ಭಾರಿ ಸದ್ದು ಮಾಡುತ್ತಿದೆ. ಜಿಲ್ಲೆಯ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು. ಡಿಸಿಎಂ ಇಷ್ಟಾದರೂ ಮಾಡಿ, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದಿದ್ದರು. ಇದಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿ, ಸಿಎಂ ಬದಲಾವಣೆ ಬಗ್ಗೆ ಅವರಿಗೇನು (ಚನ್ನಗಿರಿ ಶಾದಕ ಬಸವರಾಜ ವಿ. ಶಿವಗಂಗಾ) ಗೊತ್ತು. ಯಾರೋ ಚಾರ್ಜ್ ಮಾಡಿ ಹಿಂಗೆ ಹೇಳು ಅಂತಿರಬೇಕು. ಅದಕ್ಕೆ ಹಾಗೆ ಹೇಳಿದ್ದಾರೆ ಎಂದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ಜಯಂತಿಯಲ್ಲಿ ಸ್ವಾಮೀಜಿಯೊಬ್ಬರು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಆಗಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವೇ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ನಾವು ಹೇಳೋಕಗಲ್ಲ.ಜಾತಿವಾರು ಡಿಸಿಎಂ ಮಾಡಲ್ಲ. ಏನೇ ಮಾಡಿದರೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ತಿಳಿಸಿದರು.