ದಾವಣಗೆರೆ: ರಾಜ್ಯದಲ್ಲಿ ಮುಡಾ ಕೇಸ್ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ, ಕಾಂಗ್ರೆಸ್ ನ ಹಿರಿಯ ಶಾಸಕರು ಪೈಪೋಟಿಗೆ ಬಿದ್ದವರಂತೆ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿ ಹೇಳಿಕೆ ನಿಡುತ್ತಿದ್ದಾರೆ. ಶಾಸಕ ಆರ್.ವಿ.ದೇಶಪಾಂಡೆ, ಸಚಿವ ಎಂ.ಬಿ.ಪಾಟೀಲ್ ಬಳಿಕ ಇದೀಗ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಮನೂರು ಶಿವಶಂಕರಪ್ಪ, ಸಿಎಂ ಬದಲಾವಣೆ ಮಾಡಿದ್ರೆ ನಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡ್ತೇನೆ. ಇಲ್ಲಿ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರಲ್ಲ. ಆ ಪ್ರಸಂಗ ಬಂದರೆ ನಾನೂ ಕೂಡ ಸ್ಪರ್ಧೆ ಮಾಡುತ್ತೇನೆ, ಬಿಡುವುದಿಲ್ಲ ಎಂದು ಹೇಳಿದ್ದಾರೆ.
ರಾಜಕೀಯದಲ್ಲಿ ಯಾವುದೇ ಜೂನಿಯರ್, ಸೀನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಯಾರಿಗೆ ಬಹುಮತ ಸಿಗುತ್ತೋ, ಹೈಕಮಾಂಡ್ ಒಪ್ಪಿದ್ರೆ ಅವರು ಸಿಎಂ ಆಗ್ತಾನೆ ಎಂದಿದ್ದಾರೆ.