ದಾವಣಗೆರೆ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಯೋಜಿಸಿದ್ದ ಪ್ರತಿಭಟನೆ ಹಾಗೂ ಜಾತಿವಾರು ಸಮೀಕ್ಷೆ ಬಿಡುಗಡೆಗೆ ಆಗ್ರಹಿಸಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಆಗಿದ್ದೆ ಬೇರೆ. ಅಷ್ಟಕ್ಕೂ ಪ್ರವಾಸ ರದ್ದಾಗಲು ಕಾರಣ ಏನು ಅಂತಾ ನೋಡುವುದಾದ್ರೆ, ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ದಾವಣಗೆರೆಯಲ್ಲಿ ಅನುಮತಿ ಸಿಗದ ಕಾರಣ ಸಿದ್ದರಾಮಯ್ಯ ಪ್ರವಾಸ ರದ್ದಾಗಿದೆ.
ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಮಳೆ, ಮೋಡ ಕವಿದ ವಾತಾವರಣ ಇತ್ತು. ಇದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅವಕಾಶ ನೀಡಲಿಲ್ಲ. ಇದರಿಂದ ಪ್ರವಾಸ ರದ್ದಾಗಿದೆ.ೀ ಮೂಲಕ ದಾವಣೆಗೆರೆಯಲ್ಲಿ ನಡೆಯಲಿರುವ ಜಾತಿ ಗಣತಿ ಅನುಷ್ಠಾನದ ಹೋರಾಟ ಮತ್ತು ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಗೈರಾಗಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು.



