ದಾವಣಗೆರೆ: ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಕೊರತೆ ಇದೆ. ನಾನು ಸಹ ಬಿಜೆಪಿಗೆ ಬೇಡವಾಗಿದ್ದೇನೆ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಿಂದ ಒಬೊಬ್ಬರೇ ನಾಯಕರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ನನಗೆ ಫೋನ್ ಮಾಡಿ ಹೇಳುತ್ತಿದ್ದಾರೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೋ ಹೇಳಿಲ್ಲ. ಹೊನ್ನಾಳಿ – ನ್ಯಾಮತಿ ತಾಲ್ಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದ್ದೇನೆ. ಬಾಕಿ ಅನುದಾನ ಬಾಕಿ ಬಿಡುಗಡೆ ಮಾಡುವಂತೆ ಸಚಿವರನ್ನು ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.
ಹೊನ್ನಾಳಿ – ನ್ಯಾಮತಿ ತಾಲೂಕಿನಲ್ಲಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆಗಳ ಕರ ಪತ್ರ ಹಂಚಿದ್ದೇವೆ, ಪಕ್ಷದ ಪರವಾಗಿಯೇ ಕೆಲಸ ಮಾಡಿದ್ದೇನೆ.ಆದರೆ, ಪಕ್ಷದ ನಾಯಕರ ಮೇಲೆ ನೋವಾಗಿದೆ. ರಾಜೂ ಗೌಡ ಮತ್ತು ನನಗೂ ಅನ್ಯಾಯ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರು ಸಚಿವ ಸ್ಥಾನ ಖಾಲಿ ಇದ್ದರೂ ಸಚಿವ ಸ್ಥಾನ ನೀಡಲಿಲ್ಲ. ಜಿಲ್ಲೆಯಲ್ಲಿ ಎಸ್ ಎ ರವೀಂದ್ರನಾಥ್ ರಿಗೆ ಸಚಿವ ಸ್ಥಾನ ಕೊಡಬಹುದಿತ್ತು. ಆದರೂ ಕೊಡಲಿಲ್ಲ. ಐವರು ಶಾಸಕರು ಇದ್ದರೂ ಸಚಿವ ಸ್ಥಾನ ಸಿಗಲಿಲ್ಲ. ಇದರಿಂದ ಬಿಜೆಪಿ ಅಭ್ಯರ್ಥಿಗಳು ಸೋಲಬೇಕಾಯಿತು ಎಂದರು.



